Skip to main content

Featured

ಒಂದಂತೂ ನೆನಪಲ್ಲಿ ಇಟ್ಕೊಳಿ, ನಿಮ್ಮ ಟೀಕೆಗಳೇ ಆತನ ಯಶಸ್ಸಿನ ಮೆಟ್ಟಿಲುಗಳು....

ಒಂದು ಕುಟುಂಬದ ಜವಾಬ್ದಾರಿಯನ್ನೇ ನಿರ್ವಹಿಸೋಕೆ ಕಷ್ಟಪಡುವ ನಮಗೆ ಒಂದು ದೇಶ ಮತ್ತು ಒಂದು ರಾಜ್ಯದ ಆಡಳಿತದ ಬಗ್ಗೆ ಟೀಕೆಗಳನ್ನ ಮಾಡೋದು ತುಂಬಾ ಸುಲಭ, ಭಾರತೀಯ ರೈಲ್ವೆ ಹಿಂದೆಂದಿಗಿಂತಲೂ ಹೆಚ್ಚು ಆಧುನಿಕತೆಯನ್ನ ಅಳವಡಿಸಿಕೊಂಡು ವೇಗವಾಗಿ ಬೆಳೆಯುತ್ತಿದೆ, ಎಷ್ಟೇ ಸುರಕ್ಷತೆ ಪಾಲನೆ ಮಾಡಿದ್ರು ಕೂಡ ಕೆಲವೊಮ್ಮೆ ಈ ರೀತಿಯ ದುರ್ಘಟನೆಗಳು ನಡೆಯುತ್ತವೆ, ಈಗಾಗಲೇ ವಂದೇ ಭಾರತ್ ರೈಲಿನಿಂದ ಕೆಲವೇ ವರ್ಷಗಳಲ್ಲಿ ರೈಲುಗಳ ವೇಗ ಗಂಟೆಗೆ 180 ಕಿಲೋಮೀಟರ್ ಗೆ ಮುಟ್ಟಲಿದೆ, ಭವಿಷ್ಯದಲ್ಲಿ ಬುಲೆಟ್ ಟ್ರೈನ್ ವೇಗ ಗಂಟೆಗೆ 300 ಕಿಲೋಮೀಟರ್ಗಿಂತ ಹೆಚ್ಚು ಅಂತ ಹೇಳಿದ್ದಾರೆ, ಅಲ್ಲಿಗೆ ರೈಲ್ವೆ ಇಲಾಖೆ ಮುಂದೆ ಸವಾಲುಗಳ ಸರಮಾಲೆಯೇ ಇದೆ... ಇನ್ನು ಈ ದುರ್ಘಟನೆ ನಡೆದ ತಕ್ಷಣ ರೈಲ್ವೆ ಸಚಿವರು ಅಲ್ಲಿನ ಎಲ್ಲಾ ಕೆಲಸಗಳನ್ನೂ ಮುಂದೆ ನಿಂತು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿದರೆ ಮಾನ್ಯ ಪ್ರಧಾನಮಂತ್ರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಲ್ಲಿಯೇ ತುರ್ತು ಸಭೆ ಮಾಡಿ ಮುಂದಿನ ಕ್ರಮಕ್ಕೆ ಆದೇಶ ಕೊಟ್ಟಿದ್ದಾರೆ, ಇನ್ನು ನಮ್ಮ ಮಾನ್ಯ ಮುಖ್ಯಮಂತ್ರಿಗಳಾದಂತ ಸಿದ್ದರಾಮಯ್ಯನವರು ಘಟನೆ ನಡೆದ ತಕ್ಷಣ ಒಬ್ಬರು ಸಚಿವರನ್ನ ಘಟನಾ ಸ್ಥಳಕ್ಕೆ ಕಳಿಸಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದರೆ ಅವರನ್ನ ಸುರಕ್ಷಿತವಾಗಿ ಕರೆತರಲು ಆದೇಶ ಕೊಟ್ಟು ತಮ್ಮ ಜವಾಬ್ದಾರಿ ನಿರ್ವಹಿಸಿದ್ದಾರೆ, ಸಾಲದ್ದಕ್ಕೆ ದುರ್ಘಟನೆಯಿಂದ ಅನೇಕ ರೈಲುಗಳ ಸಂಚಾರದಲ್ಲಿ ಏರುಪೇ...

ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಅಧಿಕೃತವಾಗಿ ಘೋಷಣೆ ಮಾಡಿದರು ಮಲ್ಲಿಕಾರ್ಜುನ ಖರ್ಗೆ. ಹೃದಯ ವೈಶಾಲ್ಯತೆಯಿಂದ ಮೆರೆದರು ಕನಕಪುರದ ಬಂಡೆ.

ಕಾಂಗ್ರೆಸ್ ಪಾಳಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ಕೊನೆಗೂ ತೆರೆಬಿದ್ದಿದೆ. ಮುಖ್ಯಮಂತ್ರಿ ರೇಸ್ನಲ್ಲಿ ಅಂತಿಮವಾಗಿ ಸಿದ್ದರಾಮಯ್ಯ ಅವರಿಗೆ ಜಯವಾಗಿದ್ದು, ರಾಜ್ಯದ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಅಧಿಕೃತವಾಗಿ ಘೋಷಣೆಯಾಗಿದೆ.

ನಾಳೆಯೇ ಪ್ರಮಾಣ ವಚನ ಕಾರ್ಯಕ್ರಮ ನಗರದ ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿದೆ. ಸಿಎಂ ಸ್ಥಾನ ಖಚಿತವಾದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ದೆಹಲಿಯಿಂದ ಬೆಂಗಳೂರಿಗೆ ತೆರಳಲಿದ್ದಾರೆ. ದೆಹಲಿ ಪ್ರವಾಸ ಫಲ ನೀಡಿದ್ದು, ಸಂಜೆ ಒಳಗೆ ದೆಹಲಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಸಿದ್ದರಾಮಯ್ಯ ಬರಲಿದ್ದಾರೆ ಎಂದು ಕಾಂಗ್ರೆಸ್ ಉನ್ನತ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.


ಮೇ 13 ರಂದು ಚುನಾವಣಾ ಫಲಿತಾಂಶ ಹೊರಬಿದ್ದಾಗಿನಿಂದ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಸ್ಥಾನಕ್ಕಾಗಿ ಭಾರೀ ಪೈಪೋಟಿ ಆರಂಭವಾಗಿತ್ತು. ಅದರಲ್ಲೂ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಜಿ. ಪರಮೇಶ್ವರ್ ಕೂಡ ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದರು. ಅಲ್ಲದೆ, ಲಿಂಗಾಯತ ಸಮುದಾಯದಿಂದಲೂ ಬೇಡಿಕೆ ಬಂದಿತ್ತು. ಸಿಎಂ ಸ್ಥಾನಕ್ಕಾಗಿ ನಾಲ್ಕೈದು ದಿನಗಳಿಂದ ನಡೆದ ಪೈಪೋಟಿಗೆ ಇಂದು ತೆರೆಬಿದ್ದಿದ್ದು, ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಅಧಿಕೃತಗೊಳಿಸಿದೆ.

ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನ ಖಚಿತವಾಗುತ್ತಿದ್ದಂತೆ ಅವರ ನಿವಾಸದ ಬಳಿ ಪೊಲೀಸರು ಬ್ಯಾರಿಕೇಡ್ ಅಳವಡಿಸುತ್ತಿದ್ದಾರೆ. ಹೆಚ್ಚಿನ ಅಭಿಮಾನಿಗಳು ಹಾಗೂ ಕಾರ್ಯಕರ್ತರು ನಿವಾಸದ ಬಳಿ ಸೇರುತ್ತಿರುವ ಹಿನ್ನೆಲೆಯಲ್ಲಿ ಹೈಗ್ರೌಂಡ್ಸ್ ಠಾಣೆಯ ಪೊಲೀಸರಿಂದ ಹೆಚ್ಚಿನ ಭದ್ರತೆ ನಿಯೋಜಿಸಲಾಗುತ್ತಿದೆ. ಇನ್ಸ್ಪೆಕ್ಟರ್ ಶಿವಸ್ವಾಮಿ ನೇತೃತ್ವದಲ್ಲಿ ಭದ್ರತೆ ಏರ್ಏರ್ಪಡಿಸಲಾಗಿದೆ. 

ದೆಹಲಿಯ ಜನ್ಪತ್ನಲ್ಲಿರುವ ಸೋನಿಯಾ ಗಾಂಧಿ ನಿವಾಸದಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಮಾತುಕತೆ ನಡೆಸಿದರು. ಈ ವೇಳೆ ಸೋನಿಯಾ ಗಾಂಧಿ ಅವರು ಕೂಡ ದೂರವಾಣಿ ಮೂಲಕ ಡಿಕೆಶಿ ಅವರ ಜೊತೆ ಮಾತನಾಡಿ 2 ವರ್ಷದ ಬಳಿಕ ಅಧಿಕಾರ ಹಸ್ತಾಂತರ ಮಾಡಿ ಮುಖ್ಯಮಂತ್ರಿ ಸ್ಥಾನ ಕೊಡಿಸುವುದಾಗಿ ಮತ್ತು ಡಿಸಿಎಂ ಸ್ಥಾನದ ಜೊತೆಗೆ ಅವರು ಕೇಳುವ ಖಾತೆಗಳನ್ನೇ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Comments