Skip to main content

Featured

ಒಂದಂತೂ ನೆನಪಲ್ಲಿ ಇಟ್ಕೊಳಿ, ನಿಮ್ಮ ಟೀಕೆಗಳೇ ಆತನ ಯಶಸ್ಸಿನ ಮೆಟ್ಟಿಲುಗಳು....

ಒಂದು ಕುಟುಂಬದ ಜವಾಬ್ದಾರಿಯನ್ನೇ ನಿರ್ವಹಿಸೋಕೆ ಕಷ್ಟಪಡುವ ನಮಗೆ ಒಂದು ದೇಶ ಮತ್ತು ಒಂದು ರಾಜ್ಯದ ಆಡಳಿತದ ಬಗ್ಗೆ ಟೀಕೆಗಳನ್ನ ಮಾಡೋದು ತುಂಬಾ ಸುಲಭ, ಭಾರತೀಯ ರೈಲ್ವೆ ಹಿಂದೆಂದಿಗಿಂತಲೂ ಹೆಚ್ಚು ಆಧುನಿಕತೆಯನ್ನ ಅಳವಡಿಸಿಕೊಂಡು ವೇಗವಾಗಿ ಬೆಳೆಯುತ್ತಿದೆ, ಎಷ್ಟೇ ಸುರಕ್ಷತೆ ಪಾಲನೆ ಮಾಡಿದ್ರು ಕೂಡ ಕೆಲವೊಮ್ಮೆ ಈ ರೀತಿಯ ದುರ್ಘಟನೆಗಳು ನಡೆಯುತ್ತವೆ, ಈಗಾಗಲೇ ವಂದೇ ಭಾರತ್ ರೈಲಿನಿಂದ ಕೆಲವೇ ವರ್ಷಗಳಲ್ಲಿ ರೈಲುಗಳ ವೇಗ ಗಂಟೆಗೆ 180 ಕಿಲೋಮೀಟರ್ ಗೆ ಮುಟ್ಟಲಿದೆ, ಭವಿಷ್ಯದಲ್ಲಿ ಬುಲೆಟ್ ಟ್ರೈನ್ ವೇಗ ಗಂಟೆಗೆ 300 ಕಿಲೋಮೀಟರ್ಗಿಂತ ಹೆಚ್ಚು ಅಂತ ಹೇಳಿದ್ದಾರೆ, ಅಲ್ಲಿಗೆ ರೈಲ್ವೆ ಇಲಾಖೆ ಮುಂದೆ ಸವಾಲುಗಳ ಸರಮಾಲೆಯೇ ಇದೆ... ಇನ್ನು ಈ ದುರ್ಘಟನೆ ನಡೆದ ತಕ್ಷಣ ರೈಲ್ವೆ ಸಚಿವರು ಅಲ್ಲಿನ ಎಲ್ಲಾ ಕೆಲಸಗಳನ್ನೂ ಮುಂದೆ ನಿಂತು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿದರೆ ಮಾನ್ಯ ಪ್ರಧಾನಮಂತ್ರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಲ್ಲಿಯೇ ತುರ್ತು ಸಭೆ ಮಾಡಿ ಮುಂದಿನ ಕ್ರಮಕ್ಕೆ ಆದೇಶ ಕೊಟ್ಟಿದ್ದಾರೆ, ಇನ್ನು ನಮ್ಮ ಮಾನ್ಯ ಮುಖ್ಯಮಂತ್ರಿಗಳಾದಂತ ಸಿದ್ದರಾಮಯ್ಯನವರು ಘಟನೆ ನಡೆದ ತಕ್ಷಣ ಒಬ್ಬರು ಸಚಿವರನ್ನ ಘಟನಾ ಸ್ಥಳಕ್ಕೆ ಕಳಿಸಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದರೆ ಅವರನ್ನ ಸುರಕ್ಷಿತವಾಗಿ ಕರೆತರಲು ಆದೇಶ ಕೊಟ್ಟು ತಮ್ಮ ಜವಾಬ್ದಾರಿ ನಿರ್ವಹಿಸಿದ್ದಾರೆ, ಸಾಲದ್ದಕ್ಕೆ ದುರ್ಘಟನೆಯಿಂದ ಅನೇಕ ರೈಲುಗಳ ಸಂಚಾರದಲ್ಲಿ ಏರುಪೇ...

ಸಿದ್ದರಾಮಯ್ಯಗಿಂತ ನೂತನ ಸರ್ಕಾರದಲ್ಲಿ ಡಿಕೆ ಶಿವಕುಮಾರ್ ಮೋಸ್ಟ್ ಪವರ್ ಪುಲ್ ನಾಯಕ.

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ. ಸಿದ್ದರಾಮಯ್ಯ ಮೇ.20 ರಂದು 2ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 

ಇತ್ತ ಸಿದ್ದು ಕ್ಯಾಬಿನೆಟ್‌ನಲ್ಲಿ ಒಬ್ಬರೇ ಉಪ ಮುಖ್ಯಮಂತ್ರಿ. ಅದು ಡಿಕೆ ಶಿವಕುಮಾರ್. ಸಿಎಂ ಸ್ಥಾನಕ್ಕಾಗಿ ಪಟ್ಟು ಹಿಡಿದ ಡಿಕೆ ಶಿವಕುಮಾರ್ ಕೊನೆಗೆ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಆದರೆ ಡಿಕೆ ಶಿವಕುಮಾರ್‌ಗೆ ಕೇವಲ ಡಿಸಿಎಂ ಜವಾಬ್ದಾರಿ ಮಾತ್ರವಲ್ಲ, ಈಗಿರುವ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಸ್ಥಾನವೂ ಡಿಕೆಶಿ ಕೈಯಲ್ಲೇ ಇರಲಿದೆ. ಹೀಗಾಗಿ ಸಿದ್ದುಗಿಂತ ನೂತನ ಸರ್ಕಾರದಲ್ಲಿ ಡಿಕೆ ಶಿವಕುಮಾರ್ ಮೋಸ್ಟ್ ಪವರ್ ಪುಲ್ ನಾಯಕ ಎಂದು ಗುರುತಿಸಿಕೊಂಡಿದ್ದಾರೆ.

ಉಪಮುಖ್ಯಮಂತ್ರಿ ಹಾಗೂ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಡಿಕೆ ಶಿವಕುಮಾರ್ ನಿರ್ವಹಿಸಲಿದ್ದಾರೆ. ಈ ಮೂಲಕ ಡಿಕೆಶಿ, ಸಿದ್ದು ಕ್ಯಾಬಿನೆಟ್‌ನಲ್ಲಿ ಪ್ರಬಲ ಸ್ಥಾನ ಹೊಂದಿದ್ದರೆ, ಇತ್ತ ಪಕ್ಷದಲ್ಲೂ ಬಿಗಿ ಹಿಡಿತ ಹೊಂದಿದ್ದಾರೆ. ಇನ್ನು ಡಿಕೆ ಶಿವಕುಮಾರ್‌ಗೆ ಡಿಸಿಎಂ ಪಟ್ಟದ ಜೊತಗೆ ಪ್ರಬಲ ಖಾತೆಗಳನ್ನು ನೀಡಲಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿದೆ. ಇಂಧನ, ನೀರಾವರಿ ಸೇರಿದಂತೆ ಇತರ ಪ್ರಬಲ ಖಾತೆಗಳು ಡಿಕೆಶಿಗೆ ವಹಿಸುವ ಸಾಧ್ಯತೆ ದಟ್ಟವಾಗಿದೆ.


ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಾಪಾಲ್, ಡಿಕೆ ಶಿವಕುಮಾರ್‍‌ಗೆ ನೀಡಿರುವ ಎರಡು ಜವಾಬ್ದಾರಿ ಕುರಿತು ವಿವರಣೆ ನೀಡಿದ್ದಾರೆ. 2024ರ ಲೋಕಸಭಾ ಚುನಾವಣೆ ವರೆಗೆ ಡಿಕೆ ಶಿವಕುಮಾರ್ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಜನರು ಅಧಿಕಾರ ನೀಡಿದ್ದಾರೆ. ಅವರ ಬೆಂಬಲಕ್ಕೆ ನಾವು ಉತ್ತಮ ಆಡಳಿತ ನೀಡಿ ಋಣ ತೀರಿಸುತ್ತೇವೆ. ಅಧಿಕಾರ ನೀಡುವುದು ಹೈಕಮಾಂಡ್ ನಿರ್ಧಾರ. ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹೇಳುವುದನ್ನು ನಾವು ಕೇಳುತ್ತೇವೆ. ಹೈಕಮಾಂಡ್ ಹೇಳಿದಂತೆ ನಾನು ಕೇಳಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. 

ದೆಹಲಿಯಲ್ಲಿ ನಡದೆ ಸುದ್ದಿಗೋಷ್ಠಿಯಲ್ಲಿ ಕೆಸಿ ವೇಣುಗೋಪಾಲ್ ಸಿಎಂ ಹಾಗೂ ಡಿಸಿಎಂ ಘೋಷಣೆ ಮಾಡುತ್ತಿದ್ದಂತೆ ಕರ್ನಾಟಕದಲ್ಲಿ ಸಂಭ್ರಮಾಚರಣೆ ಶುರುವಾಗಿದೆ. ಸಿದ್ದರಾಮಯ್ಯ ತವರಿನಲ್ಲಿ ಸಂಭ್ರಮ ಜೋರಾಗಿದೆ. ಇತ್ತ ಸಿದ್ದರಾಮಯ್ಯ ಅಭಿಮಾನಿಗಳು ಸಿದ್ದು ಫೋಟೋಗೆ ಹಾಲಿನ ಅಭಿಷೇಕ ಮಾಡಲಾಗುತ್ತಿದೆ. ಇತ್ತ ಡಿಸಿಎಂ ಸ್ಥಾನಕ್ಕೆ ಆಕಾಂಕ್ಷಿಗಳಾಗಿದ್ದ ಕೆಲ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Comments