Skip to main content

Featured

ಒಂದಂತೂ ನೆನಪಲ್ಲಿ ಇಟ್ಕೊಳಿ, ನಿಮ್ಮ ಟೀಕೆಗಳೇ ಆತನ ಯಶಸ್ಸಿನ ಮೆಟ್ಟಿಲುಗಳು....

ಒಂದು ಕುಟುಂಬದ ಜವಾಬ್ದಾರಿಯನ್ನೇ ನಿರ್ವಹಿಸೋಕೆ ಕಷ್ಟಪಡುವ ನಮಗೆ ಒಂದು ದೇಶ ಮತ್ತು ಒಂದು ರಾಜ್ಯದ ಆಡಳಿತದ ಬಗ್ಗೆ ಟೀಕೆಗಳನ್ನ ಮಾಡೋದು ತುಂಬಾ ಸುಲಭ, ಭಾರತೀಯ ರೈಲ್ವೆ ಹಿಂದೆಂದಿಗಿಂತಲೂ ಹೆಚ್ಚು ಆಧುನಿಕತೆಯನ್ನ ಅಳವಡಿಸಿಕೊಂಡು ವೇಗವಾಗಿ ಬೆಳೆಯುತ್ತಿದೆ, ಎಷ್ಟೇ ಸುರಕ್ಷತೆ ಪಾಲನೆ ಮಾಡಿದ್ರು ಕೂಡ ಕೆಲವೊಮ್ಮೆ ಈ ರೀತಿಯ ದುರ್ಘಟನೆಗಳು ನಡೆಯುತ್ತವೆ, ಈಗಾಗಲೇ ವಂದೇ ಭಾರತ್ ರೈಲಿನಿಂದ ಕೆಲವೇ ವರ್ಷಗಳಲ್ಲಿ ರೈಲುಗಳ ವೇಗ ಗಂಟೆಗೆ 180 ಕಿಲೋಮೀಟರ್ ಗೆ ಮುಟ್ಟಲಿದೆ, ಭವಿಷ್ಯದಲ್ಲಿ ಬುಲೆಟ್ ಟ್ರೈನ್ ವೇಗ ಗಂಟೆಗೆ 300 ಕಿಲೋಮೀಟರ್ಗಿಂತ ಹೆಚ್ಚು ಅಂತ ಹೇಳಿದ್ದಾರೆ, ಅಲ್ಲಿಗೆ ರೈಲ್ವೆ ಇಲಾಖೆ ಮುಂದೆ ಸವಾಲುಗಳ ಸರಮಾಲೆಯೇ ಇದೆ... ಇನ್ನು ಈ ದುರ್ಘಟನೆ ನಡೆದ ತಕ್ಷಣ ರೈಲ್ವೆ ಸಚಿವರು ಅಲ್ಲಿನ ಎಲ್ಲಾ ಕೆಲಸಗಳನ್ನೂ ಮುಂದೆ ನಿಂತು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿದರೆ ಮಾನ್ಯ ಪ್ರಧಾನಮಂತ್ರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಲ್ಲಿಯೇ ತುರ್ತು ಸಭೆ ಮಾಡಿ ಮುಂದಿನ ಕ್ರಮಕ್ಕೆ ಆದೇಶ ಕೊಟ್ಟಿದ್ದಾರೆ, ಇನ್ನು ನಮ್ಮ ಮಾನ್ಯ ಮುಖ್ಯಮಂತ್ರಿಗಳಾದಂತ ಸಿದ್ದರಾಮಯ್ಯನವರು ಘಟನೆ ನಡೆದ ತಕ್ಷಣ ಒಬ್ಬರು ಸಚಿವರನ್ನ ಘಟನಾ ಸ್ಥಳಕ್ಕೆ ಕಳಿಸಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದರೆ ಅವರನ್ನ ಸುರಕ್ಷಿತವಾಗಿ ಕರೆತರಲು ಆದೇಶ ಕೊಟ್ಟು ತಮ್ಮ ಜವಾಬ್ದಾರಿ ನಿರ್ವಹಿಸಿದ್ದಾರೆ, ಸಾಲದ್ದಕ್ಕೆ ದುರ್ಘಟನೆಯಿಂದ ಅನೇಕ ರೈಲುಗಳ ಸಂಚಾರದಲ್ಲಿ ಏರುಪೇ...

ಚಿಕ್ಕಬಳ್ಳಾಪುರದ ನೂತನ ಶಾಸಕ ಪ್ರದೀಪ್ ಈಶ್ವರ್ (MLA Pradeep Eshwar) ಅವರ ಸಾಕು ತಾಯಿ ರತ್ನಮ್ಮ ಇಂದು ನಿಧನರಾಗಿದ್ದಾರೆ.

ಚಿಕ್ಕಬಳ್ಳಾಪುರ: ನೂತನ ಶಾಸಕ ಪ್ರದೀಪ್ ಈಶ್ವರ್ (MLA Pradeep Eshwar) ಅವರ ಸಾಕು ತಾಯಿ ರತ್ನಮ್ಮ ಇಂದು ನಿಧನರಾಗಿದ್ದಾರೆ. ಪೇರೇಸಂದ್ರ ಗ್ರಾಮದಲ್ಲಿ ಸಾಕು ತಾಯಿ ರತ್ನಮ್ಮ ನಿಧನರಾಗಿದ್ದು, ಅವರಿಗೆ 72 ವರ್ಷ ವಯಸ್ಸು ಆಗಿತ್ತು. ರತ್ನಮ್ಮ ಅವರು ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.  ಇಂದು ಸಿಎಂ ಮತ್ತು ಡಿಸಿಎಂ ಸೇರಿದಂತೆ ಪ್ರಮಾಣ ವಚನ ಕಾರ್ಯಕ್ರಮ ಹಿನ್ನೆಲೆ ಪ್ರದೀಪ್ ಈಶ್ವರ್ ಬೆಂಗಳೂರಿನಲ್ಲಿದ್ದರು. ಇನ್ನು ವಿಷಯ ತಿಳಿಯುತ್ತಿದ್ದಂತೆ ಪ್ರದೀಪ್ ಈಶ್ವರ್ ಪೇರೇಸಂದ್ರದತ್ತ ತೆರಳುತ್ತಿದ್ದಾರೆ. ಪೇರೇಸಂದ್ರ ಗ್ರಾಮಕ್ಕೆ ತೆರಳಿ ತಾಯಿ ರತ್ನಮ್ಮ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ. 

ಪ್ರದೀಪ್ ಈಶ್ವರ್ ಅವರು ಜೀವಶಾಸ್ತ್ರ ಉಪನ್ಯಾಸಕರಾಗಿದ್ದಾರೆ. ಜೊತೆಗೆ ಪ್ರದೀಪ್ ಅತ್ಯುತ್ತಮ ಮೋಟಿವೇಷನಲ್ ಸ್ಪೀಕರ್ ಆಗಿದ್ದಾರೆ. ಪ್ರದೀಪ್ ಈಶ್ವರ್ ಅವರು, ಪರಿಶ್ರಮ ಅಕಾಡೆಮಿಯನ್ನು ಪ್ರಾರಂಭಿಸುವ ಮೊದಲು, ಭಾರತದ ಉದ್ದಗಲಕ್ಕೂ ಸಂಚರಿಸಿ ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ.

ಪ್ರದೀಪ್ NEET ನಂತಹ ಸ್ಪರ್ಧಾತ್ಮಕ ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸಲು ಅಗತ್ಯವಿರುವ ಜ್ಞಾನ ಹೊಂದಿದ್ದಾರೆ. ಸಾವಿರಾರು ವಿದ್ಯಾರ್ಥಿಗಳಿಗೆ ನೆರವಾಗಲು ಪರಿಶ್ರಮ ಎಂಬ ಸಂಸ್ಥೆಯನ್ನು ಕಟ್ಟಿದ್ದಾರೆ. ಇವರ ಅಕಾಡೆಮಿಯ ನೀಟ್ ವಿದ್ಯಾರ್ಥಿಗಳು ವರ್ಷದಿಂದ ವರ್ಷಕ್ಕೆ ಅತ್ಯುತ್ತಮ ಶ್ರೇಯಾಂಕಗಳನ್ನು ಪಡೆದುಕೊಳ್ಳುತ್ತಿದ್ದಾರೆ.


ರಾಜ್ಯದಲ್ಲೂ MBBS ಸೀಟುಗಳನ್ನು ಪಡೆಯಲು ನೂರಾರು ವಿದ್ಯಾರ್ಥಿಗಳಿಗೆ ಸಹಾಯ ಮಾಡಿದ್ದಾರೆ. ಅವರ ವಿದ್ಯಾರ್ಥಿಗಳು ಭಾರತದ ಬಹುತೇಕ ಉನ್ನತ ವೈದ್ಯಕೀಯ ಕಾಲೇಜುಗಳಲ್ಲಿ ಸೀಟ್ ಪಡೆದು ಓದುತ್ತಿದ್ದಾರೆ.

ಇನ್ನು 2018ರ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್ ನವೀನ್ ಕಿರಣ್ ಪರ ಪ್ರಚಾರ ಮಾಡಿದ್ದರು. ಈ ವೇಳೆ ಅವರ ವಿರುದ್ಧ 23 ಪ್ರಕರಣಗಳು ದಾಖಲಾಗಿದ್ದವು.

Comments