Skip to main content

Featured

ಒಂದಂತೂ ನೆನಪಲ್ಲಿ ಇಟ್ಕೊಳಿ, ನಿಮ್ಮ ಟೀಕೆಗಳೇ ಆತನ ಯಶಸ್ಸಿನ ಮೆಟ್ಟಿಲುಗಳು....

ಒಂದು ಕುಟುಂಬದ ಜವಾಬ್ದಾರಿಯನ್ನೇ ನಿರ್ವಹಿಸೋಕೆ ಕಷ್ಟಪಡುವ ನಮಗೆ ಒಂದು ದೇಶ ಮತ್ತು ಒಂದು ರಾಜ್ಯದ ಆಡಳಿತದ ಬಗ್ಗೆ ಟೀಕೆಗಳನ್ನ ಮಾಡೋದು ತುಂಬಾ ಸುಲಭ, ಭಾರತೀಯ ರೈಲ್ವೆ ಹಿಂದೆಂದಿಗಿಂತಲೂ ಹೆಚ್ಚು ಆಧುನಿಕತೆಯನ್ನ ಅಳವಡಿಸಿಕೊಂಡು ವೇಗವಾಗಿ ಬೆಳೆಯುತ್ತಿದೆ, ಎಷ್ಟೇ ಸುರಕ್ಷತೆ ಪಾಲನೆ ಮಾಡಿದ್ರು ಕೂಡ ಕೆಲವೊಮ್ಮೆ ಈ ರೀತಿಯ ದುರ್ಘಟನೆಗಳು ನಡೆಯುತ್ತವೆ, ಈಗಾಗಲೇ ವಂದೇ ಭಾರತ್ ರೈಲಿನಿಂದ ಕೆಲವೇ ವರ್ಷಗಳಲ್ಲಿ ರೈಲುಗಳ ವೇಗ ಗಂಟೆಗೆ 180 ಕಿಲೋಮೀಟರ್ ಗೆ ಮುಟ್ಟಲಿದೆ, ಭವಿಷ್ಯದಲ್ಲಿ ಬುಲೆಟ್ ಟ್ರೈನ್ ವೇಗ ಗಂಟೆಗೆ 300 ಕಿಲೋಮೀಟರ್ಗಿಂತ ಹೆಚ್ಚು ಅಂತ ಹೇಳಿದ್ದಾರೆ, ಅಲ್ಲಿಗೆ ರೈಲ್ವೆ ಇಲಾಖೆ ಮುಂದೆ ಸವಾಲುಗಳ ಸರಮಾಲೆಯೇ ಇದೆ... ಇನ್ನು ಈ ದುರ್ಘಟನೆ ನಡೆದ ತಕ್ಷಣ ರೈಲ್ವೆ ಸಚಿವರು ಅಲ್ಲಿನ ಎಲ್ಲಾ ಕೆಲಸಗಳನ್ನೂ ಮುಂದೆ ನಿಂತು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿದರೆ ಮಾನ್ಯ ಪ್ರಧಾನಮಂತ್ರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಲ್ಲಿಯೇ ತುರ್ತು ಸಭೆ ಮಾಡಿ ಮುಂದಿನ ಕ್ರಮಕ್ಕೆ ಆದೇಶ ಕೊಟ್ಟಿದ್ದಾರೆ, ಇನ್ನು ನಮ್ಮ ಮಾನ್ಯ ಮುಖ್ಯಮಂತ್ರಿಗಳಾದಂತ ಸಿದ್ದರಾಮಯ್ಯನವರು ಘಟನೆ ನಡೆದ ತಕ್ಷಣ ಒಬ್ಬರು ಸಚಿವರನ್ನ ಘಟನಾ ಸ್ಥಳಕ್ಕೆ ಕಳಿಸಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದರೆ ಅವರನ್ನ ಸುರಕ್ಷಿತವಾಗಿ ಕರೆತರಲು ಆದೇಶ ಕೊಟ್ಟು ತಮ್ಮ ಜವಾಬ್ದಾರಿ ನಿರ್ವಹಿಸಿದ್ದಾರೆ, ಸಾಲದ್ದಕ್ಕೆ ದುರ್ಘಟನೆಯಿಂದ ಅನೇಕ ರೈಲುಗಳ ಸಂಚಾರದಲ್ಲಿ ಏರುಪೇ...

Rs. 2,000 ನೋಟು ಹಿಂಪಡೆದ ಆರ್ಬಿಐ; ನಿಮ್ಮಲ್ಲಿ ಆ ನೋಟಿದ್ದರೆ ಏನು ಏನು ಕಥೆ?


Rs. 2,000 ನೋಟು ಹಿಂಪಡೆದ ಆರ್ಬಿಐ; ನಿಮ್ಮಲ್ಲಿ ಆ ನೋಟಿದ್ದರೆ ಏನು ಏನು ಕಥೆ? ಇಲ್ಲಿದೆ ಡೀಟೇಲ್ಸ್

ಎರಡು ಸಾವಿರ ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. ಆದರೆ, ಈ ಕರೆನ್ಸಿ ನೋಟುಗಳು ಲೀಗಲ್ ಅಗಿ ಮುಂದುವರಿಯಲಿವೆ.

ಎರಡು ಸಾವಿರ ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. ಆದರೆ, ಈ ಕರೆನ್ಸಿ ನೋಟುಗಳು ಕಾನೂನಾತ್ಮಕವಾಗಿ ಸಿಂಧುವಾಗಿ ಮುಂದುವರಿಯಲಿವೆ. ಆರ್ಬಿಐ ಶುಕ್ರವಾರ ಈ ಹೇಳಿಕೆ ನೀಡಿದೆ. 2,000 ರೂ ನೋಟು ಹೊಂದಿರುವವರು ಅದನ್ನು ಮರಳಿಸಲು ಸಮಯಾವಕಾಶ ಕೊಡಲಾಗುತ್ತದೆ. ಆರ್ಬಿಐ ನೀಡಿರುವ ಮಾಹಿತಿ ಪ್ರಕಾರ 2023 ಸೆಪ್ಟಂಬರ್ 30ರೊಳಗೆ 2,000 ಮುಖಬೆಲೆಯ ನೋಟುಗಳನ್ನು ವಾಪಸ್ ಕೊಟ್ಟು ವಿನಿಮಯ ಮಾಡಿಕೊಳ್ಳಬಹುದು.

2,000 ರೂ ಮುಖಬೆಲೆಯ ನೋಟು ಹಿಂಪಡೆಯಲು ಏನು ಕಾರಣ?

ಈಗ ಚಲಾವಣೆಯಲ್ಲಿರುವ 2,000ರೂ ಮುಖಬೆಲೆಯ ನೋಟುಗಳಲ್ಲಿ ಶೇ. 89ರಷ್ಟು ನೋಟುಗಳನ್ನು 2017ರ ಮಾರ್ಚ್ಗೆ ಮುಂಚೆ ಮುದ್ರಿಸಿ ಬಿಡುಗಡೆ ಮಾಡಿದಂಥವು. ಇವುಗಳ ಕಾಲಾವಧಿ 4-5 ವರ್ಷ ಮಾತ್ರ. ಹೀಗಾಗಿ, ಈ ನೋಟುಗಳನ್ನು ಹಿಂಪಡೆಯಲಾಗುತ್ತಿದೆ.

2,000 ರೂ ಮುಖಬೆಲೆಯ ನೋಟುಗಳು ಹೆಚ್ಚು ಚಲಾವಣೆಯಲ್ಲಿ ಇಲ್ಲದಿರುವುದು

ಜನರ ಹಣ ವಹಿವಾಟಿನ ಅಗತ್ಯಕ್ಕೆ ಬೇರೆ ಕರೆನ್ಸಿಗಳು ಸಾಕಷ್ಟು ಇರಇರುವುದು

2028ರ ಮಾರ್ಚ್ 31ರಲ್ಲಿ 2,000 ರೂ ಮುಖಬೆಲೆಯ ನೋಟುಗಳ ಒಟ್ಟು ಮೌಲ್ಯ 6.73 ಲಕ್ಷ ಕೋಟಿ ರೂ ಇತ್ತು. ಎಲ್ಲಾ ಕರೆನ್ಸಿ ನೋಟುಗಳ ಒಟ್ಟು ಮೊತ್ತದ ಶೇ. 37.3 ರಷ್ಟು ನೋಟುಗಳು 2,000 ರೂ ಮುಖಬೆಲೆಯದ್ದಾಗಿದ್ದವು. ಈ ಸಂಖ್ಯೆಯು 2023 ಮಾರ್ಚ್ 31ಕ್ಕೆ ಶೇ. 10.8ಕ್ಕೆ ಬಂದಿಳಿದಿದೆ.

ಅಲ್ಲದೇ ಜನರೂ ಕೂಡ 2,000 ರೂ ನೋಟಿನ ಚಲಾವಣೆಯನ್ನೂ ತೀರಾ ಕಡಿಮೆ ಮಾಡಿದ್ದಾರೆ. 500 ರೂ ಮುಖಬೆಲೆಯ ನೋಟುಗಳಿಗೆ ಹೆಚ್ಚು ಬೇಡಿಕೆ ಇದೆ.

Comments